ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಪಗಳಿಗೆ ಬೆಂಗಳೂರಿನಲ್ಲಿ ಪ್ರತ್ಯುತ್ತರ ನೀಡಿರುವ ಎಚ್.ಎಂ.ರೇವಣ್ಣ ಅವರು, ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕರು ಕುಮಾರಸ್ವಾಮಿಯವರ ಆಡಳಿತದಿಂದ ಬೇಸತ್ತು ರಾಜೀನಾಮೆ ನೀಡಿದರು. ಸಿದ್ದರಾಮಯ್ಯ ಯಾರನ್ನೂ ಮುಂಬೈಗೆ ಕಳುಹಿಸಲಿಲ್ಲ. ಕಾಂಗ್ರೆಸ್ ಶಾಸಕರು ತಾವಾಗಿಯೇ ಹೋಗಿದ್ದರು.ಆದರೆ ಜೆಡಿಎಸ್ ಶಾಸಕರಾದ ವಿಶ್ವನಾಥ್, ಗೋಪಾಲಯ್ಯ, ನಾರಾಯಣಗೌಡ ಅವರನ್ನು ಸಿದ್ದರಾಮಯ್ಯ ಅವರೇ ಕಳುಹಿಸಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಸರ್ಕಾರ ಪತನ ಆದ ಮೇಲೆ ಏನು ಬೇಕಾದರೂ ಹೇಳಬಹುದು. ಆದರೆ ಎರಡೂ ಪಕ್ಷಗಳು ಕೂಡ ಸರ್ಕಾರ ಪತನಕ್ಕೆ ಕಾರಣ. ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದರು.