ಮುಖ್ಯಮಂತ್ರಿ ಯಡಿಯೂರಪ್ಪನವರು ಆರ್.ಎಸ್.ಎಸ್. ಮುಖ್ಯ ಕಚೇರಿ ಕೇಶವ ಕೃಪಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸೋಣ ಮುಂದಿನ ದಿನಗಳಲ್ಲಿ, ಉಳಿದಿಬ್ಬರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ಮಾಡೋಣ ಎಂಬ ಕೆಲವೊಂದು ವಿಷಯಗಳನ್ನು ಹೇಳಿದರು .
ಬಿಜೆಪಿ ಹೈಕಮಾಂಡ್ ಅಶ್ವತನಾರಾಯಣ, ಗೋವಿಂದ ಕಾರಜೋಳ ಹಾಗೂ ಲಕ್ಷ್ಮಣ ಸವದಿ ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿಸುವ ಇರಾದೆ ಹೊಂದಿದ್ದು, ಆದರೆ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಲಕ್ಷ್ಮಣ ಸವದಿಯವರನ್ನು ಮಂತ್ರಿಯನ್ನಾಗಿ ಮಾಡಿದ್ದಕ್ಕೆ ಕೆಲ ಶಾಸಕರುಗಳು ಕೆಂಡಾಮಂಡಲವಾಗಿರುವ ಕಾರಣ, ಲಕ್ಷ್ಮಣ ಸವದಿ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗುತ್ತದೆ ಎಂಬ ಚಿಂತೆ ಮುಖ್ಯಮಂತ್ರಿಗಳನ್ನು ಕಾಡುತ್ತಿದೆ ಎನ್ನಲಾಗಿದೆ.