ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಹಲವಾರು ಚರ್ಚೆಗಳು ಹಾಗೂ ಭಿನ್ನಮತಗಳು ಕಾಂಗ್ರೆಸ್ ವಲಯದಲ್ಲಿ ಮೂಡಿಬರುತ್ತಿದೆ . ವಿರೋಧ ಪಕ್ಷ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ ಅವರನ್ನು ಆ ಸ್ಥಾನದಿಂದ ತಪ್ಪಿಸಿ, ಕೃಷ್ಣ ಬೈರೇಗೌಡ ಅವರನ್ನು ವಿಪಕ್ಷ ಸ್ಥಾನ ನಾಯಕ ಸ್ಥಾನ ನೀಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರನ್ನು ಕೇವಲ ಶಾಸಕಾಂಗ ಪಕ್ಷದ ನಾಯಕನಿಗೆ ಸೀಮಿತಗೊಳಿಸಲು ಎಐಸಿಸಿ ನಿರ್ಧರಿಸಿದೆ.
ಸಿದ್ದರಾಮಯ್ಯ ಅಭ್ಯರ್ಥಿಯೇ ಆದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಿ , ಆ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರನ್ನು ನೇಮಿಸುವ ಸಾಧ್ಯತೆ ಇದೆ. ಆ ಮೂಲಕ ಪಕ್ಷದ ಮೇಲೆ ಸಿದ್ದರಾಮಯ್ಯ ಹಿಡಿತ ತಪ್ಪಿಹೋಗುತ್ತದೆ ಎಂದು ಹೇಳಲಾಗುತ್ತಿದೆ .