ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡುವುದು ಮತ್ತೊಂದು ರೀತಿಯ ತಲೆ ನೋವಾಗಿ ಪರಿಣಮಿಸಿದೆ. ಕೆಲವರು ತಮಗೆ ಇಂತಹದ್ದೇ ಜಿಲ್ಲೆಯ ಉಸ್ತುವಾರಿ ನೀಡಬೇಕೆಂದು ಈಗಾಗಲೇ ಬಿಎಸ್‍ವೈ ಬಳಿ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ ನೀಡಬೇಕು ಎಂಬುದು ಕಗ್ಗಂಟಾಗಿದೆ.
ಅದರಲ್ಲೂ ವಿಶೇಷವಾಗಿ ಬೆಂಗಳೂರು ಮಹಾನಗರ, ಬಳ್ಳಾರಿ, ಬೆಳಗಾವಿ ಸೇರಿದಂತೆ ಪ್ರಮುಖ ಜಿಲ್ಲೆಗಳ ಹೊಣೆಗಾರಿಕೆಯನ್ನು ಯಾರಿಗೆ ನೀಡುವುದು ಎಂಬುದೇ ತಲೆನೋವಾಗಿದೆ. ಇದಕ್ಕೆ ಒತ್ತಡವೇನಾದರೂ ಯಡಿಯೂರಪ್ಪ ಮೇಲೆ ಬರ್ತಾ ಇದೆಯಾ ಎಂಬ ಪ್ರಶ್ನೆ ಕೂಡ ಕಾಡ್ತಾ ಇದೆ .