ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ಹುಚ್ಚಾಟ ನಡೆಸಿದ್ದಾರೆ. ಕಾರಿನ ಗ್ಲಾಸ್ ಒಡೆದು ಹಾಕಿ ಯುವಕನೊಬ್ಬನ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಹುಚ್ಚ ವೆಂಕಟ್ ಮೇಲೆ ಹಲ್ಲೆ ಮಾಡಿದ್ದಾರೆ.
ಸ್ವಲ್ಪ ದಿನದ ಹಿಂದೆ ಚೆನ್ನೈನಲ್ಲಿ ಕೊಳಕು ಬಟ್ಟೆ ಧರಿಸಿ ಹುಚ್ಚನಂತೆ ಅಲೆಯುತ್ತಿದ್ದ ಹುಚ್ಚ ವೆಂಕಟ್ ಮಡಿಕೇರಿಯಲ್ಲಿ ಪ್ರತ್ಯಕ್ಷನಾಗಿದ್ದು, ಸುಖಾಸುಮ್ಮನೆ ದಾರಿಹೋಕರನ್ನು ಬೆದರಿಸಿ ಕಾರಿನ ಗ್ಲಾಸ್ ಒಡೆದು ಹಾಕಿದ್ದು, ಕಾರಿನ ಮೇಲೆ ಕಾಲಿಟ್ಟು ದಬ್ಬಾಳಿಕೆ ನಡೆಸಿದ್ದಾರೆ. ಹೀಗಾಗಿ ಸ್ಥಳೀಯರು ಹುಚ್ಚ ವೆಂಕಟ್ರನ್ನು ಹಿಗ್ಗಾಮುಗ್ಗಾ ಹೊಡೆದಿದ್ದಾರೆ ಎಂದು ಹೇಳಲಾಗುತ್ತಿದೆ .