ನಿನ್ನೆ ರಾತ್ರಿಯೇ ಡಿ.ಕೆ. ಶಿವಕುಮಾರ್ ಅವರ ಮನೆಗೆ ಬಂದ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದ್ದಾರೆ. ಹೈಕೋರ್ಟ್ ಅರ್ಜಿ ವಜಾಗೊಳಿಸಿದ ಬಳಿಕ ಶಿವಕುಮಾರ್ ವಕೀಲರೊಂದಿಗೆ ಚರ್ಚೆ ನಡೆಸಿದ್ದು, ಜೆಡಿಎಸ್ ವರಿಷ್ಠ ದೇವೇಗೌಡರನ್ನೂ ಭೇಟಿ ಮಾಡಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಮುಂದಿನ ಕಾನೂನು ಹೋರಾಟದ ಕುರಿತು ವಕೀಲರೊಂದಿಗೆ ಚರ್ಚೆ ನಡೆಸಿದ್ದಾರೆ. ಡಿ.ಕೆ. ಶಿವಕುಮಾರ್ ಗೆ ಸೇರಿದ ದೆಹಲಿ ನಿವಾಸದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಅಕ್ರಮ ಹಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ.