ಹೌದು ಹೀಗಂತ ಸ್ವತಃ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ , ಈ ಹಿಂದೆ ಗುಜರಾತ್ ನ ಶಾಸಕರಿಗೆ ಡಿ.ಕೆ.ಶಿವಕುಮಾರ್ ರಾಮನಗರದ ಈಗಲ್ ಟನ್ ರೆಸಾರ್ಟ್ ನಲ್ಲಿ ಇರಿಸಿದ್ದರು ಇದೇ ಕಾರಣಕ್ಕೆ ಬಿಜೆಪಿ ಸರ್ಕಾರ ನಮ್ಮ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ ಎಂದರು . ನವದೆಹಲಿಯ ಡಿಕೆಶಿ ಅವರ ಮನೆಯಲ್ಲಿ ಸಿಕ್ಕ ಹಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಅವರ ಸದಾಶಿವನಗರದ ಮನೆಗೆ ಸಮನ್ಸ್ ಕಳಿಸಿದ್ದು ಹೀಗಾಗಿ ಡಿಕೆ ಶಿವಕುಮಾರ್ಗೆ ಇದರಿಂದ ಏನಾದರೂ ತೊಂದರೆ ಇದೆಯಾ ಆಗುವವರು ಭಯ ಪಟ್ಟಿದ್ದಾರಾ ಎಂಬ ಪ್ರಶ್ನೆ ಕೂಡ ಸರ್ಕಾರದಲ್ಲಿ ಕೇಳಿಬರುತ್ತಿದೆ .
ಅದನ್ನು ವಿವರಿಸಲು ಇಂದು ಡಿಕೆ ಶಿವಕುಮಾರ್ ಅವರು ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು . ನಾನು ಯಾವುದೇ ತಪ್ಪು ಮಾಡಿಲ್ಲ ನಾನು ಯಾರ ಬಳಿಯೂ ಲಂಚ ಪಡೆದಿಲ್ಲ ಆ ಹಣ ನನ್ನದೇ ನಾನು ನ್ಯಾಯಕ್ಕೆ ಬೆಲೆ ಕೊಡುತ್ತೇನೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದರು . ಇದೇ ವಿಚಾರಕ್ಕೆ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಸೇರಿಸಿದ್ರೆ ಇದರಲ್ಲಿ ಬಿಜೆಪಿ ಕೈವಾಡ ಇದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.