ಡಿ.ಕೆ.ಶಿವಕುಮಾರ್ ಅವರ ವಿಚಾರಣೆ ಪೂರ್ಣಗೊಳಿಸಿ ಬಿಡುಗಡೆ ಮಾಡಿದರೆ ಕಾಂಗ್ರೆಸ್ ಪ್ರತಿಭಟನೆಗಿಳಿಯದೆ ತಟಸ್ಥವಾಗಿ ಉಳಿಯಲಿದೆ. ಇಲ್ಲದೆ ಹೋದರೆ ಡಿ.ಕೆ.ಶಿವಕುಮಾರ್ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಈ ಇಬ್ಬರ ಪ್ರಕರಣಗಳನ್ನು ಮುಂದಿಟ್ಟುಕೊಂಡು ದೇಶಾದ್ಯಂತ ಪ್ರತಿಭಟನೆ ನಡೆಸುವ ತಯಾರಿ ನಡೆಸಿದೆ.
ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದರೂ ಅದೇ ಆರೋಪಗಳನ್ನು ಆಧಾರವಾಗಿಟ್ಟುಕೊಂಡು ಜಾರಿ ನಿರ್ದೇಶನಾಲಯದ ವಿಚಾರಣೆ ನಡೆಸುವ ಮೂಲಕ ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿರುವುದು, ತಡರಾತ್ರಿ ಸಮನ್ಸ್ ನೀಡಿ ನಾಳೆ ಮಧ್ಯಾಹ್ನವೇ ವಿಚಾರಣೆಗೆ ಹಾಜರಾಗಿ ಎಂದು ಒತ್ತಡ ಹೇರುವುದು ಸೇರಿದಂತೆ ಹಲವಾರು ಪ್ರಯತ್ನಗಳನ್ನು ಕೇಂದ್ರ ಸರ್ಕಾರ ಮಾಡುತ್ತಿದೆ