ನೋಟ್ ಬ್ಯಾನ್ ಆದ ಸಮಯದಲ್ಲಿ ಅಕ್ರಮ ಹಣ ವರ್ಗಾವಣೆ ಕಾಯಿದೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಕಳೆದ ಎರಡು ದಿನಗಳಿಂದ ಇಡಿ ಅಧಿಕಾರಿಗಳ ವಿಚಾರಣೆ ನಡೆಸುತ್ತಿದ್ದರು.
ನಿನ್ನೆ ನಡೆದ ವಿಚಾರಣೆಯಲ್ಲಿ ಇಂದು 11 ಗಂಟೆಗೆ ಹಾಜರಾಗಬೇಕೆಂದು ಇಡಿ ಅಧಿಕಾರಿಗಳು ಸಮನ್ ನೀಡಿದ್ದರು
ಅಧಿಕಾರಿಗಳ ಆದೇಶದಂತೆ ಇಂದು 11 ಗಂಟೆಗೆ ಡಿಕೆಶಿ ಅವರು ವಿಚಾರಣೆಗೆ ಹಾಜರಾಗಿದ್ದರು.
ಇಡಿ ಅಧಿಕಾರಿಗಳ ವಿಚಾರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಸೋಮವಾರ ಹಬ್ಬದ ದಿನದಂದು ವಿಚಾರಣೆ ಮುಂದುವರೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಮತ್ತೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಲಾಗಿದೆ. ಹಬ್ಬ ಇದೆ ಎಂದರೂ ಸೋಮವಾರ ಬರಬೇಕೆಂದು ಇಡಿ ಸೂಚಿಸಿದ್ದಾರೆ ಎಂದು ತಿಳಿಸಿದರು.
ಇಡಿ ವಿಚಾರಣೆ ಮುಗಿಸಿದ ನಂತರ ಸೋದರ ಡಿಕೆ ಸುರೇಶ್ ಅವರ ಮನೆಗೆ ಡಿಕೆ ಶಿವಕುಮಾರ್ ತೆರಳಿದರು.
ಅಪಾರ್ಟ್ ಮೆಂಟ್‍ನಲ್ಲಿ ಪತ್ತೆ ಹಣದ ಜತೆಗೆ ಹವಾಲಾ ಮೂಲಕ ಏಜೆಂಟ್‍ಗಳ ಸಹಾಯದಿಂದ ಡಿಕೆ ಶಿವಕುಮಾರ್ ಕೋಟ್ಯಂತರ ರೂ.ಗಳನ್ನು ಕಾಂಗ್ರೆಸ್ ಹೈಕಮಾಂಡ್‍ಗೆ ನೀಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು