ವಿನಯ್ ರಾಜ್ ಕುಮಾರ್ ಅವರು ಬಾಕ್ಸರ್ ಆಗಿ ಚಿತ್ರವೊಂದರಲ್ಲಿ ಅಭಿನಯಿಸುತ್ತಿರುವ ಸುದ್ದಿ ಈಗಾಗಲೇ ಹರಿದಾಡಿತ್ತು. ಛಾಯಾಗ್ರಾಹಕ ಕರಮ್ ಚಾವ್ಲಾ ಅವರು ಇದೇ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಪುಷ್ಕರ ಮಲ್ಲಿಕಾರ್ಜುನಯ್ಯ ಅವರು ಬಂಡವಾಳ ಹೂಡುತ್ತಿದ್ದಾರೆ.
ಇನ್ನು ಈ ಚಿತ್ರದ ನಾಯಕಿ ಯಾರು ಎಂಬ ವಿಷಯವನ್ನು ಇದುವರೆಗೂ ಬಿಟ್ಟುಕೊಟ್ಟಿರಲಿಲ್ಲ. ಇದೀಗ ಬಂದಿರುವ ಸುದ್ದಿಯ ಪ್ರಕಾರ ಈ ಚಿತ್ರಕ್ಕೆ ನಾಯಕಿಯಾಗಿ ಆಶಿಕಾ ರಂಗನಾಥ್ ಅವರ ಸಹೋದರಿ ಅನುಷಾ ರಂಗನಾಥ್ ಅವರು ಆಯ್ಕೆಯಾಗಿದ್ದಾರೆ. ಹೌದು ಧಾರಾವಾಹಿ ಮತ್ತು ಕೆಲ ಒಂದಷ್ಟು ಚಿತ್ರಗಳಲ್ಲಿ ಅಭಿನಯಿಸಿರುವ ಅನುಷಾ ರಂಗನಾಥ್ ಅವರು ಈ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದು ವಿನಯ್ ರಾಜ್ ಕುಮಾರ್ ಅವರಿಗೆ ಜೋಡಿಯಾಗಲಿದ್ದಾರೆ.