ಐಟಿ ದಾಳಿ ವೇಳೆ 8.59 ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇಡಿ) ಮಾಜಿ ಸಚಿವ, ಟ್ರಬಲ್ ಶೂಟರ್ ಎಂದೇ ಹೆಸರುವಾಸಿ ಆಗಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದ್ದಾರೆ. ಹೊಸದಿಲ್ಲಿಯ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಕಳೆದ ನಾಲ್ಕು ದಿನಗಳಿಂದ ತೀವ್ರ ವಿಚಾರಣೆಗೊಳಪಡಿಸಿದ ಬಳಿಕ ಇದೀಗ ರಾತ್ರಿ ಡಿಕೆ ಶಿವಕುಮಾರ್ ಅವರನ್ನು ಬಂಧಿಸಲಾಗಿದೆ.
ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಿಲ್ಲ ಎಂಬ ಕಾರಣವನ್ನು ನೀಡಿ ಡಿಕೆಶಿ ಅವರನ್ನು ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಹೊಸದಿಲ್ಲಿಯ ಲೋಕನಾಯಕ ಭವನದಲ್ಲಿರುವ ಕಚೇರಿಯಲ್ಲಿ ಸತತ 4 ದಿನಗಳ ಕಾಲ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಆಗಸ್ಟ್ 1, 2017ರಲ್ಲಿ ಡಿಕೆ ಶಿವಕುಮಾರ್ ಅವರ ನಿವಾಸ, ಕಚೇರಿಗಳ ಮೇಲೆ ಐಟಿ ನಡೆಸಿತ್ತು. ಡಿಕೆಶಿಗೆ ಸೇರಿದ್ದ ಒಟ್ಟು 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿತ್ತು. ಆ ವೇಳೆ ಹೊಸದಿಲ್ಲಿಯ ಡಿಕೆಶಿ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ 8.9 ಕೋಟಿ ರೂ. ನಗದು ಪತ್ತೆಯಾಗಿತ್ತು.