ಸಮ್ಮಿಶ್ರ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ , ಹಾಸನ ಹಾಗೂ ಮಂಡ್ಯ ಭಾಗಕ್ಕೆ ಹೆಚ್ಚಿನ ಕಾಮಗಾರಿಗಳನ್ನು ಹಂಚಿಕೆ ಮಾಡಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆದರೆ ಈಗ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ತಿಂಗಳೊಳಗೆ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿರುವುದು ರಾಜಕೀಯವಾಗಿ ಕುತೂಹಲ ಕೆರಳಿಸಿದೆ.
ಆರ್ಥಿಕ ಇಲಾಖೆಯ ಅನುಮೋದನೆ ಪಡೆಯದೆ 1281.21 ಕೋಟಿ ರೂ. ಮೊತ್ತದ ಕಾಮಗಾರಿಗಳಲ್ಲಿ ಕೆಲವೊಂದಕ್ಕೆ ಕಾಮಗಾರಿ ಆದೇಶ ಸಹ ನೀಡಿರುವುದು ಪತ್ತೆಯಾಗಿದ್ದು, ತಕ್ಷಣಕ್ಕೆ ಪ್ರಾರಂಭವಾಗದ ಕಾಮಗಾರಿಗಳ ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಲಾಗಿದೆ.