ರೋಸ್ ಅವೆನ್ಯೂ ಕೋರ್ಟ್ ನಲ್ಲಿ ಡಿಕೆಶಿ ಪ್ರಕರಣದ ವಿಚಾರಣೆ ನಡೆದಿದ್ದು, ವಾದ ಪ್ರತಿವಾದ ರೋಚಕವಾಗಿ ಮುಂದುವರೆದಿದೆ. ಡಿ.ಕೆ. ಶಿವಕುಮಾರ್ ಅವರ ಮೇಲೆ ದಾಖಲಾಗಿರುವ ಕೇಸ್ ಗಳಿಗೆ ಸಂಬಂಧಿಸಿದಂತೆ ವಿಚಾರಣೆ ಅಗತ್ಯವಿದ್ದು 14 ದಿನಗಳ ಕಾಲ ವಶಕ್ಕೆ ನೀಡಬೇಕೆಂದು ಜಾರಿ ನಿರ್ದೇಶನಾಲಯ ಮನವಿ ಮಾಡಿದೆ.
ಶಿವಕುಮಾರ್ ಪರವಾಗಿ ವಾದ ಮಂಡಿಸುತ್ತಿರುವ ಅಭಿಷೇಕ್ ಮನು ಸಿಂಘ್ವಿ, ಇಡಿ ಅಧಿಕಾರಿಗಳ ವಿಚಾರಣೆಗೆ ಎಲ್ಲ ರೀತಿಯ ಸಹಕಾರ ನೀಡುತ್ತಿರುವ ಡಿಕೆಶಿ ಅವರನ್ನು ಇಡಿ ವಶಕ್ಕೆ ನೀಡಬಾರದು. ಅವರ ಆರೋಗ್ಯ ಮತ್ತು ಮಾನವೀಯ ದೃಷ್ಟಿಯಿಂದ ಇಡಿ ಕಸ್ಟಡಿಗೆ ಒಪ್ಪಿಸಬಾರದು ಎಂದು ವಾದ ಮಂಡಿಸಿದ್ದಾರೆ.