ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ಅವರು ವೈಯಕ್ತಿಕ ಕಾರಣದಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಹೇಳಿದ್ದರೂ ಕೂಡ ರಾಜೀನಾಮೆಗೆ ರಾಜಕೀಯ ಒತ್ತಡವೇ ಕಾರಣ ಎಂದು ಹೇಳಲಾಗುತ್ತಿದೆ.
ನನ್ನ ರಾಜೀನಾಮೆಗೆ ವೈಯಕ್ತಿಕ ಕಾರಣಗಳಿವೆಯೇ ಹೊರತು ಯಾವುದೇ ವೈಮನಸ್ಸಿಲ್ಲ. ಮಂಗಳೂರು ಡಿಸಿ ಪೋಸ್ಟ್ ಗೂ ರಾಜೀನಾಮೆಗೂ ಸಂಬಂಧವಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನ ಮತ್ತು ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅರ್ಧದಲ್ಲಿಯೇ ರಾಜೀನಾಮೆ ನೀಡಿ ಹೋಗುತ್ತಿರುವುದಕ್ಕೆ ಕ್ಷಮೆ ಯಾಚಿಸುತ್ತೇನೆ ಎಂದು ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.