ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಬಸ್ ಸಂಚಾರ ಕೈಗೊಂಡಿದ್ದಾರೆ. ಹೆಬ್ಬಾಳದಿಂದ ಟಿನ್ ಫ್ಯಾಕ್ಟರಿ, ಮಾರತ್ ಹಳ್ಳಿ, ಬೆಳ್ಳಂದೂರು, ಸಿಲ್ಕ್ ಬೋರ್ಡ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅವರು ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸುತ್ತಾರೆ ಎಂದು ಹೇಳಲಾಗುತ್ತಿದೆ .
ಎರಡು ಬಸ್ ಗಳಲ್ಲಿ ಬೆಂಗಳೂರಿನ ಹಲವು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಹೇಳಿದ್ದಾರೆ . ಭಾನುವಾರ ಟ್ರಾಫಿಕ್ ಕಡಿಮೆ ಇರುವ ಹಿನ್ನೆಲೆಯಲ್ಲಿ ನಾಳೆ ನಗರದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ಮಾಡುತ್ತೇವೆ ಎಂದು ಹೇಳಲಾಗ್ತಿದೆ .