ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದೀಗ ಸಿದ್ದರಾಮಯ್ಯ ಸರ್ಕಾರದಲ್ಲಿ ಆಗಿದ್ದ ಹಗರಣಗಳೆಲ್ಲ ಪರಿಶೀಲನೆ ನಡೆಸುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಆರೋಪಿಸಿದ್ದ 9014 ಕೋಟಿ ಮೊತ್ತದ ಕೃಷಿಭಾಗ್ಯ, 1066 ಕೋಟಿ ಮೊತ್ತದ ತ್ಯಾಜ್ಯ ವಿಲೇವಾರಿ ಹಗರಣ, 4010 ಕೋಟಿ ಮೊತ್ತದ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣಾ ಘಟಕಗಳ ನಿರ್ಮಾಣ ಹಗರಣ,
96 ಕೋಟಿ ಮೊತ್ತದ ತ್ಯಾಜ್ಯ ವಿಲೇವಾರಿ ವಾಹನಗಳ ಖರೀದಿ ನಿರ್ವಹಣಾ ಗುತ್ತಿಗೆ (ಟಿಪಿಎಸ್) ಹಗರಣ ಹಾಗೂ ಬೆಳ್ಳಳ್ಳಿ, ಬಾಗಲೂರು, ಮಿಟ್ಟಗಾನಹಳ್ಳಿ ಕ್ವಾರಿಗಳಿಗೆ ಲೈನರ್‍ಗಳ ಅಳವಡಿಕೆ ಹೆಸರಿನಲ್ಲಿ ನಡೆದಿರುವ 109 ಕೋಟಿ ಹಗರಣಗಳ ಬಗ್ಗೆ ತನಿಖೆ ನಡೆಸಿ ಎರಡು ತಿಂಗಳೊಳಗೆ ಸಮಗ್ರ ವರದಿ ನೀಡುವಂತೆ ಆದೇಶಿಸಲಾಗಿದೆ.ಈ ಹಗರಣಗಳ ಬಗ್ಗೆ ಹಲವಾರು ದೂರುಗಳು ಬಂದಿರುವುದು ಮತ್ತು ಮಾಧ್ಯಮಗಳಲ್ಲಿ ವರದಿ ಬಂದಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.