ಕೇಂದ್ರದ ವಿರುದ್ಧ ಕೋಪಗೊಂಡ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ, ತಮ್ಮ ನಿಲುವುಗಳನ್ನು ಬೆಂಬಲಿಸುವವರ ಜೊತೆಗೆ ಸಸಿಕಾಂತ್ ಸೆಂಥಿಲ್ ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳಿದ್ದಾರೆ.
ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸಸಿಕಾಂತ್ ಸೆಂಥಿಲ್ ಮೊದಲು ಮಾಡಬೇಕಾದ ಕೆಲಸವೆಂದರೆ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ಹೋಗಲಿ. ಇದು ಪ್ರಾಯೋಗಿಕವಾಗಿಯೂ ಸುಲಭ ಮತ್ತು ಅಂತಿಮ ಪರಿಹಾರ ಕೂಡ ಸಿಕ್ಕಂತಾಗುತ್ತದೆ ಎಂದು ಹೇಳಿದ್ದಾರೆ.