ಬರಲಿದೆ ಸುದೀಪ್ – ಪುನೀತ್ – ಜಗ್ಗೇಶ್ ಮಲ್ಟಿ ಸ್ಟಾರರ್ ಸಿನಿಮಾ.!

Date:

ಕಳೆದ ವರ್ಷ ಶಿವಣ್ಣ ಮತ್ತು ಸುದೀಪ್ ಅಭಿನಯದ ದಿ ವಿಲನ್ ಚಿತ್ರ ಬಿಡುಗಡೆಯಾಗಿ ಸಕ್ಸಸ್ ಆದ ಬೆನ್ನಲ್ಲೇ ಮಲ್ಟಿ ಸ್ಟಾರರ್ ಸಿನಿಮಾ ಗಳಿಗೆ ಕನ್ನಡ ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಾಗಿದೆ. ಇನ್ನು ಇತ್ತೀಚಿಗಷ್ಟೇ ಪೈಲ್ವಾನ್ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಪುನೀತ್ ರಾಜಕುಮಾರ್ ಅವರು ಅತಿಥಿಯಾಗಿ ಆಗಮಿಸಿದ್ದರು ಈ ವೇಳೆ ಕಿಚ್ಚ ಮತ್ತು ಅಪ್ಪು ಇಬ್ಬರು ಒಂದೇ ಚಿತ್ರದಲ್ಲಿ ಅಭಿನಯಿಸಲಿದ್ದಾರಾ ಎಂಬ ಪ್ರಶ್ನೆ ಬಂದಾಗ ಇಬ್ಬರು ನಟರು ಸಹ ಒಂದೊಳ್ಳೆ ಚಿತ್ರಕಥೆ ಸಿಕ್ಕರೆ ಖಂಡಿತ ನಾವು ಮಲ್ಟಿಸ್ಟಾರ್ ಸಿನಿಮಾದಲ್ಲಿ ಅಭಿನಯಿಸುತ್ತೇನೆ ಎಂದು ಒಪ್ಪಿಗೆಯನ್ನು ಸೂಚಿಸಿದ್ದರು. ಇನ್ನು ಇತ್ತೀಚೆಗೆ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಅಪ್ಪು ಮತ್ತು ಕಿಚ್ಚ ಮಲ್ಟಿ ಸ್ಟಾರರ್ ಸಿನಿಮಾ ಬರುವುದು ಪಕ್ಕಾ ಎನ್ನಲಾಗುತ್ತಿದೆ.

ಹಾಗೂ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮಕ್ಕೆ ಮೊನ್ನೆಯಷ್ಟೇ ನವರಸ ನಾಯಕ ಜಗ್ಗೇಶ್ ಅವರು ಆಗಮಿಸಿದ್ದರು. ಇದೇ ವೇಳೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಪುನೀತ್ ಮತ್ತು ಜಗ್ಗೇಶ್ ಅವರು ತಮ್ಮ ಹಳೆಯ ನೆನಪುಗಳನ್ನು ಕಾರ್ಯಕ್ರಮದಲ್ಲಿ ಹೇಳಿಕೊಳ್ಳುವ ಮುಖಾಂತರ ಹಳೆಯ ದಿನಗಳನ್ನು ನೆನೆದರು. ಹಾಗೂ ಪುನೀತ್ ಮತ್ತು ಜಗ್ಗೇಶ್ ಇಬ್ಬರೂ ಸಹ ಒಂದೇ ಚಿತ್ರದಲ್ಲಿ ಅಭಿನಯಿಸುವ ಆಸೆಯನ್ನು ಜಗ್ಗೇಶ್ ಅವರು ಇದೇ ವೇಳೆ ಹೇಳಿಕೊಂಡರು ಮತ್ತು ಇದಕ್ಕೆ ಅಪ್ಪು ಅವರು ಸಹ ಗ್ರೀನ್ ಸಿಗ್ನಲ್ ನೀಡಿದರು. ಇದನ್ನೆಲ್ಲಾ ಗಮನಿಸಿದ ಅಪ್ಪು ಮತ್ತು ಜಗ್ಗೇಶ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...