ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಬಸವರಾಜಪ್ಪ, ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ನೇತೃತ್ವದ ನಿಯೋಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಸ್ಯೆಗಳಿಗೆ ಪರಿಹಾರ ನೀಡುತ್ತೇವೆ ಹಾಗೂ ಇದೇ ವೇಳೆ ರೈತರ ಹಿತರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು,
ರೈತರಿಗೆ ಇನ್ನಷ್ಟು ಯೋಜನೆ ರೂಪಿಸಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ. ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ಈಗಾಗಲೇ ಸಾಕಷ್ಟು ಪರಿಹಾರ ನೀಡಲಾಗಿದೆ ಹಾಗು ನಿಯೋಗದ ಮನವಿ ಮೇರೆಗೆ ನೆರೆ ಪೀಡಿತ ಪ್ರದೇಶಗಳಲ್ಲಿ ಸಾಲ ಪಾವತಿಸುವಂತೆ ಬಲವಂತ ಮಾಡುತ್ತಿರುವ ಮೈಕ್ರೋಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು .