ಡಿಕೆಶಿ ಬೆಂಬಲಿಗರು ಹಾಗೂ ಅವರ ಅಭಿಮಾನಿಗಳು ಸೇರಿ ವಿವಿಧ ಸಂಘಟನೆಗಳು ಏರ್ಪಡಿಸಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ನೈತಿಕವಾಗಿ, ಮಾನಸಿಕವಾಗಿ ಬೆಂಬಲ ನೀಡುವ ಸಲುವಾಗಿ ಈ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.
ಕೇಂದ್ರ ಸರ್ಕಾರ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ರಾಜಕೀಯ ದ್ವೇಷ ಸಾಧಿಸುತ್ತಿದೆ. ನಮಗೆ ಕಾನೂನಿನ ಮೇಲೆ ಗೌರವವಿದೆ. ನಿಯಮಾನುಸಾರ ತೆಗೆದುಕೊಳ್ಳುವ ಯಾವುದೇ ಕ್ರಮಗಳಿಗೆ ನಮ್ಮ ವಿರೋಧವಿಲ್ಲ.ಆದರೆ ದ್ವೇಷದ ರಾಜಕಾರಣಕ್ಕೆ ನಮ್ಮ ಸಹಮತವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಎಚ್ಚರಿಕೆ ನೀಡಿದರು.