ಇಂದು ಶಿವಮೊಗ್ಗ ನಗರದ ಶಾಲೆಗಳಿಗೆ ರಜೆ ನೀಡಲಾಗಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. 3000 ಕ್ಕೂ ಅಧಿಕ ಪೊಲೀಸರು ಕೆ.ಎಸ್.ಆರ್.ಪಿ. ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಿನ್ನೆ ಸಂಜೆಯಿಂದಲೇ ಮದ್ಯ ಮಾರಾಟ ಬಂದ್ ಮಾಡಲಾಗಿದೆ. 80 ಸಿಸಿ ಕ್ಯಾಮೆರಾ ಮೂಲಕ ಹದ್ದಿನ ಕಣ್ಣಿಡಲಾಗಿದೆ. ಜೊತೆಗೆ ಮೆರವಣಿಗೆ ದೃಶ್ಯಗಳನ್ನು ಚಿತ್ರೀಕರಿಸಲಾಗುವುದು.
ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರವನ್ನು ಕೇಸರಿಯಿಂದ ಸಿಂಗರಿಸಲಾಗಿದೆ. ಕೇಸರಿ ಬಂಟಿಂಗ್ಸ್, ಭಗವಾದ್ವಜ ಅಳವಡಿಸಲಾಗಿದೆ.