ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಮಾತನಾಡಿದರು ಈ ಬಾರಿ ನಾಲ್ಕುವರೆ ದಶಕಗಳ ನಂತರ ಭೀಕರ ಅತಿವೃಷ್ಟಿ ಉಂಟಾಗಿ ಹಿಂದೆಂದೂ ಕಾಣದ ನಷ್ಟ ಸಂಭವಿಸಿದೆ. ಹೀಗಾಗಿ ಮಳೆ ನಿಲ್ಲಲ್ಲಿ ಎಂದು ಶಾರದಾಂಬೆಯಲ್ಲಿ ಪ್ರಾರ್ಥಿಸಿದ್ದೇನೆ ಎಂದರು.
ಸಾಮಾನ್ಯವಾಗಿ ಹಿಂದೆ ಶೃಂಗೇರಿ ಶಾರದಾಂಬೆಯ ಸನ್ನಿಧಾನದಲ್ಲಿ ಮಳೆ, ನಾಡಿನ ಒಳಿತಿಗಾಗಿ ಪೂಜೆ, ಪುನಸ್ಕಾರ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಮಳೆ ನಿಲ್ಲಿಸುವಂತೆ ದೇವರಲ್ಲಿ ಬೇಡಿಕೊಂಡಿದ್ದೇನೆ.ಎಲ್ಲವೂ ಶೀಘ್ರದಲ್ಲೇ ಸರಿ ಹೋಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ಮತ್ತಿತರ ಕಡೆ ಈ ಬಾರಿ ಭೀಕರವಾದ ಪ್ರವಾಹ ಉಂಟಾಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಸಂತ್ರಸ್ತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಿಕೊಡುತ್ತಿದೆ ಎಂದರು.