ಕಳೆದ 10ದಿನಗಳಿಂದ ಜಾರಿ ನಿರ್ದೇಶನಾಲಯದ ವಶದಲ್ಲಿ ವಿಚಾರಣೆಗೆ ಒಳಗಾಗಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಇಂದು ಎರಡನೇ ಬಾರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಇದಕ್ಕೂ ಮುನ್ನ ಇಡಿ ಕಚೇರಿ ಹಾಗೂ ನ್ಯಾಯಾಲಯದ ಸುತ್ತಮುತ್ತ ಬಿಗಿ ಬಂದೋಬಸ್ತ್ ಆಯೋಜಿಸಲಾಗಿತ್ತು. ದಾರಿ ಉದ್ದಕ್ಕೂ ಪೊಲೀಸ್ ಬೆಂಗಾವಲಿನ ಮೂಲಕ ಡಿ.ಕೆ.ಶಿವಕುಮಾರ್ ಅವರನ್ನು ಕರೆತರಲಾಯಿತು.ಮಧ್ಯಾಹ್ನದ ಭೋಜನ ವಿರಾಮದ ನಂತರ ನ್ಯಾಯಾಧೀಶರ ಮುಂದೆ ಡಿ.ಕೆ.ಶಿವಕುಮಾರ್ ಹಾಜರಾದರು. ಇದಕ್ಕೂ ಮುನ್ನ ನಾಲ್ಕು ದಿನಗಳ ಕಾಲ ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು.