ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ 10 ಜಿಲ್ಲೆಗಳ ಬಿಜೆಪಿ ಶಾಸಕರ ಜೊತೆ ಯಡಿಯೂರಪ್ಪನವರು ಸಮಾಲೋಚನೆ ನಡೆಸಿದ್ದು, ನೆರೆ – ಬರ ಪರಿಹಾರ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ತಲಾ 25 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ, ಗದಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಬಿಜೆಪಿ ಶಾಸಕರುಗಳು ಈ ಸಭೆಯಲ್ಲಿ ಭಾಗಿಯಾಗಿದ್ದು, ಅವರುಗಳ ಕ್ಷೇತ್ರದ ಸಮಸ್ಯೆಗಳನ್ನು ಆಲಿಸಿದ್ದಾರೆ.