ಜಾರಿ ನಿರ್ದೇಶನಾಲಯದ ವಿಶೇಷ ಕೋರ್ಟ್ ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು ಅನಾರೋಗ್ಯದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಯ ಆರ್.ಎಂ.ಎಲ್. ಆಸ್ಪತ್ರೆಗೆ ದಾಖಲಿಸಲಾಗುತ್ತದೆ.
ವೈದ್ಯರು ಪರೀಕ್ಷೆ ನಡೆಸಿ ಡಿ.ಕೆ. ಶಿವಕುಮಾರ್ ಆರೋಗ್ಯವಾಗಿದ್ದಾರೆ ಎಂದು ದೃಢಪಡಿಸಿದರೆ ಅವರನ್ನು ತಿಹಾರ್ ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸುದೀರ್ಘ ವಿಚಾರಣೆ, ಅನಾರೋಗ್ಯದ ಕಾರಣ ಡಿ.ಕೆ. ಶಿವಕುಮಾರ್ ಬಳಲಿದ್ದು, ಬಹುತೇಕ ಆಸ್ಪತ್ರೆಯಲ್ಲೇ ಉಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.