ಕಾಂಗ್ರೆಸ್ ಪಕ್ಷದ ಮುಖಂಡ ಮತ್ತು ಮಾಜಿ ಸಚಿವರಾದ ಡಿಕೆ ಶಿವಕುಮಾರ್ ಅವರನ್ನು ಅಕ್ರಮ ಹಣ ಹೊಂದಿರುವ ಆರೋಪದ ಮೇಲೆ ಇಡಿ ಅಧಿಕಾರಿಗಳು ಬಂಧಿಸಿ ಇದೀಗ ನ್ಯಾಯಾಂಗ ಬಂಧನದಲ್ಲಿ ಇಟ್ಟಿರುವುದು ನಮಗೆಲ್ಲರಿಗೂ ತಿಳಿದೇ ಇದೆ. ಇನ್ನು ಡಿಕೆ ಶಿವಕುಮಾರ್ ಅವರ ವಿಚಾರಣೆಯ ಬೆನ್ನಲ್ಲೇ ಇದೀಗ ಕರ್ನಾಟಕದ ಮತ್ತೊಬ್ಬ ಕಾಂಗ್ರೆಸ್ಸಿಗರ ಮೇಲೆ ಇಡಿ ಅಧಿಕಾರಿಗಳ ಕಣ್ಣು ಬಿದ್ದಿದೆ. ಹೌದು ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕಳುಹಿಸಿದೆ.
ಸೆಪ್ಟೆಂಬರ್ 14 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ನೋಟಿಸ್ ನೀಡಿತ್ತು ಆದರೆ ಆ ದಿನ ಕೆಲಸ ಇರುವುದರಿಂದ ಮತ್ತೊಂದು ದಿನ ವಿಚಾರಣೆಗೆ ಬರಲು ಅವಕಾಶ ನೀಡಬೇಕಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದರು. ಇನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮನವಿಯನ್ನು ಪುರಸ್ಕರಿಸಿದ ಜಾರಿ ನಿರ್ದೇಶನಾಲಯ ಸೆಪ್ಟೆಂಬರ್ 19 ರಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಚಾರಣೆಗೆ ಮುಹೂರ್ತ ನಿಗದಿ ಪಡಿಸಿದ್ದು ಆ ದಿನದಂದು ಇಡಿ ಅಧಿಕಾರಿಗಳು ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಚಾರಣೆಯನ್ನು ನಡೆಸಲಿದ್ದಾರೆ.