ಜೆಡಿಎಸ್ ಬಗ್ಗೆ ಹಲವು ವರ್ಷಗಳಿಂದಲೂ ಅಪಪ್ರಚಾರ ಮಾಡಲಾಗುತ್ತಿದೆ ಇದೇನು ಹೊಸದಲ್ಲ ಎಂದ ಅವರು, ಕುಮಾರಸ್ವಾಮಿಯವರನ್ನು ಮತ್ತೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಲು ಪಕ್ಷ ಪಣತೊಟ್ಟಿದೆ ಎಂದರು. ರಾಜ್ಯದಲ್ಲಿ ಜೆಡಿಎಸ್‍ನ್ನು ಅಳಿಸಿ ಹಾಕಲು ಯಾರಿಂದಲೂ ಸಾಧ್ಯವಿಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬವನ್ನು ಜನ ಕೈಬಿಡುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಉಪಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರ ರಾಷ್ಟ್ರಮಟ್ಟದಲ್ಲಿ ತೀರ್ಮಾನವಾಗಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಡಿ.ಕೆ.ಶಿವಕುಮಾರ್ ಪರವಾಗಿ ಪ್ರತಿಭಟನೆಗೆ ಹೋಗಲಿಲ್ಲ ಎಂಬ ಆಕ್ಷೇಪಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಡಿಕೆಶಿ ತಾಯಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ಟೀಕಾಕಾರರಿಂದ ಪಾಠ ಕಲಿಯಬೇಕಾಗಿಲ್ಲ ಎಂದು ಹೇಳಿದ ಅವರು, ಹಗಲು ಒಂದು ಕಡೆ, ರಾತ್ರಿ ಇನ್ನೊಂದು ಕಡೆ ಇರುವವರು ಡಿ.ಕೆ.ಶಿವಕುಮಾರ್ ಪರ ಮಾತನಾಡುತ್ತಿದ್ದಾರೆ.