ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಪರಿಶಿಷ್ಟ ಜಾತಿ, ಪಂಗಡದ ಪಾಲಿಗೆ ಎಸ್ಸಿಪಿ-ಟಿಎಸ್ಪಿ ಕ್ರಾಂತಿಕಾರಕ ಯೋಜನೆಯಾಗಿದೆ. ಆದರೆ, ಈ ಕಾಯ್ದೆಯನ್ನು ದುರ್ಬಲಗೊಳಿಸಲು ಬಿಜೆಪಿ ಸರಕಾರ ಷಡ್ಯಂತ್ರ ರೂಪಿಸುತ್ತಿದೆ. ಸರಕಾರದ ದಲಿತ ವಿರೋಧಿ ನೀತಿ ವಿರುದ್ಧ ಬಿಜೆಪಿಯ ದಲಿತ ಸಮುದಾಯದ ಶಾಸಕರೂ ದನಿ ಎತ್ತಬೇಕು. ಇಲ್ಲದಿದ್ದರೆ ಇತಿಹಾಸ ನಿಮ್ಮನ್ನು ಕ್ಷಮಿಸದು ಎಂದು ತಿಳಿಸಿದ್ದಾರೆ.
ಕೇಂದ್ರದ ಬಿಜೆಪಿ ಸರಕಾರ ಎಲ್‌ಐಸಿ ಸೇರಿದಂತೆ ಕೇಂದ್ರಾಡಳಿತಕ್ಕೆ ಒಳಪಟ್ಟ ಹುದ್ದೆಗಳ ಪರೀಕ್ಷೆಯನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಬರೆಯಲು ಕಡ್ಡಾಯಗೊಳಿಸಿದೆ.ಬಿಜೆಪಿ ನಾಯಕರ ಇಂತಹ ಕನ್ನಡ ವಿರೋಧಿ ನೀತಿಯನ್ನು ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.