ಅನರ್ಹ ಶಾಸಕರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ನೀಡಿದ್ದ ಹೇಳಿಕೆಗೆ ಟ್ವೀಟ್ ಮೂಲಕ ಡಾ.ಸುಧಾಕರ್ ತಿರುಗೇಟು ನೀಡಿದ್ದಾರೆ. ರಾಜನಂತಿದ್ದ ಅನರ್ಹರು ಬಿಜೆಪಿ ಬಾಗಿಲಲ್ಲಿ ಭಿಕ್ಷೆ ಬೇಡುತ್ತಿದ್ದಾರೆ ಎಂದು ನಿನ್ನೆ ದಿನೇಶ್‍ಗುಂಡೂರಾವ್ ಅವರು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅನರ್ಹ ಶಾಸಕ ಸುಧಾಕರ್, ನಿಮ್ಮ ಮಾತಿನ ಮೇಲೆ ನಿಗಾ ಇರಲಿ. ನಾವು ಭಿಕ್ಷುಕರಲ್ಲ ಎಂದು ಎಚ್ಚರಿಸಿದ್ದಾರೆ.
ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಕಾಂಗ್ರೆಸ್ ಪಕ್ಷ ಹೀನಾಯ ಸ್ಥಿತಿಗೆ ತಲುಪಿದೆ. ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಅಂದು ಕಾಂಗ್ರೆಸ್ ಪಕ್ಷಕ್ಕೆ ಬಂದಿತ್ತು.