ದೆಹಲಿಯ ಆರ್ ಎಂ ಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ನಂತ್ರ ಬೆಳಿಗ್ಗೆ ಡಿ.ಕೆ.ಶಿವಕುಮಾರ್ ಅವ್ರನ್ನು ತಿಹಾರ್ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆ ನವದೆಹಲಿಯ ರೋಸ್ ಅವೆನ್ಯೂ ವಿಶೇಷ ಕೋರ್ಟ್ ನಲ್ಲಿ ನಡೆದಿದ್ದು, ನ್ಯಾಯಾಧೀಶರಾದ ಅಜಯ ಕುಮಾರ್ ಕುಹರ್ ವಿಚಾರಣೆಯನ್ನು ಶನಿವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ ಇಡಿ ಪರ ವಕೀಲರಾದ ಕೆ.ಎಂ. ನಟರಾಜ್, ಡಿಕೆಶಿ ಇಷ್ಟೊಂದು ಪ್ರಮಾಣದಲ್ಲಿ ಆಸ್ತಿ ಗಳಿಕೆ ಮಾಡಿದ್ದರ ಬಗ್ಗೆ ತನಿಖೆ ನಡೆಯಬೇಕಿದೆ.ಅಕ್ರಮ ಹಣದಿಂದ ಅವರು ಆಸ್ತಿ ಸಂಪಾದಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಸಾಕಷ್ಟು ದಾಖಲೆಗಳಿವೆ. ಜಾಮೀನು ನೀಡಬಾರದು ಎಂದು ಮನವಿ ಮಾಡಿದ್ದಾರೆ.






