No menu items!
16.3 C
Munich
Thursday, April 30, 2026

ಉಪಚುನಾವಣೆಯಲ್ಲಿ ಜನ ತಕ್ಕಪಾಠ ಕಲಿಸುತ್ತಾರೆ !?

Must read

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು, ಪಕ್ಷಾಂತರಿಗಳನ್ನು ಸೋಲಿಸಲು ಕಾಂಗ್ರೆಸ್ ಪಕ್ಷ ಕೂಡ ಸಜ್ಜಾಗಿದೆ. ಇಂತಹವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.ಇನ್ನೆರಡು ದಿನದಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಪ್ರಚಾರ ನಡೆಸಲಾಗುವುದು ಎಂದು ಹೇಳಿದ ಅವರು, ಎಲ್ಲಾ ಸ್ಥಾನಗಳಲ್ಲಿ ನಾವೇ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರು ಸಾಕಿದ ಗಿಣಿಗಳು ಹದ್ದಾಗಿ ಕುಕ್ಕಿದವು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿಯವರು ಯಾವ ಪ್ರಜ್ಞಾಯಿಟ್ಟುಕೊಂಡು ಮಾತನಾಡಿದ್ದಾರೋ ಗೊತ್ತಿಲ್ಲ.ಜೆಡಿಎಸ್‍ನ ಜಿ.ಟಿ.ದೇವೇಗೌಡರೇ ಸ್ವತಃ ಮೂರ್ನಾಲ್ಕು ದಿನಗಳ ಹಿಂದೆ ಕುಮಾರಸ್ವಾಮಿಯವರೇ ಬಿಜೆಪಿಗೆ ಮತ ಹಾಕಿಸುವಂತೆ ಕುಮಾರಸ್ವಾಮಿಯವರ ಮಂತ್ರಿಮಂಡಲದಲ್ಲಿದ್ದವರು ಹೇಳಿದ್ದಾರೆಯೇ ಹೊರತು ಕಾಂಗ್ರೆಸ್‍ನವರಲ್ಲ. ಇದನ್ನು ನೋಡಿದರೆ ಯಾರದು ನಾಟಕ ಎಂದು ತಿಳಿಯುವುದು ಎಂದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article