ಯುವಕನೊಬ್ಬ ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ಆತನಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಬೆದರಿಕೆ ಹಾಕಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮಂಗಳವಾರದಂದು ಪ್ರತಿಭಟನಾ ಮೆರವಣಿಗೆ ನಡೆದಿದ್ದು ಈ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮರಾಠಿಯಲ್ಲಿ ಮಾತನಾಡಿದ್ದರು. ಹೀಗಾಗಿ ಯುವಕ ಇದನ್ನು ಖಂಡಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ.ಆಗ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಪೋಸ್ಟ್ ಹಾಕಿದ್ದ ಯುವಕನಿಗೆ ‘ಇನ್ನೊಮ್ಮೆ ಮೇಡಂ ವಿರುದ್ಧ ಪೋಸ್ಟ್ ಮಾಡಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.