ಅಲೋಕ್ ಕುಮಾರ್ ನಿವಾಸದ ಮೇಲೆ, ಹೈದರಾಬಾದ್ ವಿಭಾಗದ ಸಿಬಿಐ ಎಡಿಜಿಪಿ ದರ್ಜೆಯ ಅಧಿಕಾರಿಗಳ ನೇತೃತ್ವದಲ್ಲಿ ಸುಮಾರು 20 ಜನರ ತಂಡ ಮಿಂಚಿನ ದಾಳಿ ನಡೆಸಿ ಪೆನ್‍ಡ್ರೈವ್, ಲ್ಯಾಪ್‍ಟಾಪ್, ಮೊಬೈಲ್ ಸೇರಿದಂತೆ ಕೆಲವು ಪ್ರಮುಖ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದೆ.
ಈ ವೇಳೆ ಮನೆಯಲ್ಲಿದ್ದ ಅಲೋಕ್‍ಕುಮಾರ್ ಅವರನ್ನು ಸಿಬಿಐ ತನಿಖಾ ತಂಡ ಎರಡು ಗಂಟೆಗೂ ಹೆಚ್ಚು ಕಾಲ ಅಲೋಕ್‍ಕುಮಾರ್ ಅವರನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಂಡಿದೆ. ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಅಲೋಕ್‍ಕುಮಾರ್ ಕೈವಾಡ ಇದೆಯಾ ಎಂಬ ಪ್ರಶ್ನೆ ಎಲ್ಲೆಡೆ ಚರ್ಚೆಗೀಡಾಗಿದೆ .