ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪಕ್ಷದ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ಹೈಕಮಾಂಡ್ ನೇಮಕ ಮಾಡಿದೆ.
ನಳಿನ್ ಕುಮಾರ್ ಕಟೀಲ್ ನೇಮಕಾತಿ ಸಂದರ್ಭದಲ್ಲಿ ಸೌಜನ್ಯಕ್ಕಾದರೂ ಯಡಿಯೂರಪ್ಪನವರ ಜೊತೆ ಸಮಾಲೋಚನೆ ನಡೆಸಿಲ್ಲವೆಂದು ಹೇಳಲಾಗಿದ್ದು, ಇದೀಗ ನಡೆಯುತ್ತಿರುವ ಕೆಲ ಬೆಳವಣಿಗೆಗಳು ರಾಜ್ಯ ಬಿಜೆಪಿ ಮೇಲಿನ ಯಡಿಯೂರಪ್ಪನವರ ಹಿಡಿತ ಕೈ ತಪ್ಪುತ್ತಿದೆಯಾ ಅಥವಾ ರಾಜ್ಯದ ಬಿಜೆಪಿ ಎಲ್ಲಾ ನಿರ್ಣಯ ನಳಿನ್ ಕುಮಾರ್ ಅವರೆ ತೆಗೆದು ಕೊಳ್ಳುತ್ತಾರಾ ಎಂಬ ಅನುಮಾನ ಎಲ್ಲರಲ್ಲು ಬರುತ್ತಿದೆ .
ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಆಯ್ಕೆ ಎನ್ನಲಾಗುತ್ತಿದ್ದು, ಇದರ ಹಿಂದೆ ಯಡಿಯೂರಪ್ಪ ಅವರನ್ನು ಮುಲೆಗುಂಪು ಮಾಡುತ್ತಿದ್ಯಾ ಕೇಂದ್ರ ಸರ್ಕಾರ ಎನ್ನುವ ಮಾತು ರಾಜ್ಯದ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.