ಈಗಾಗಲೇ ಎರಡು ತಿಂಗಳಿನಿಂದಲೂ ವಿಪಕ್ಷ ನಾಯಕನ ಆಯ್ಕೆಯಾಗದೆ ವಿಳಂಬವಾಗಿದೆ ನಿನ್ನೆ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಹಿರಿಯ ಕಾಂಗ್ರೆಸ್ ನಾಯಕರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ದೆಹಲಿ ಮಟ್ಟದಲ್ಲಿ ಮತ್ತಷ್ಟು ಲಾಬಿಗಳು ಜೋರಾಗಿದ್ದು, ಪಕ್ಷದಲ್ಲಿ ಗುಂಪುಗಾರಿಕೆ ಹೆಚ್ಚಾಗುತ್ತಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರೇ ವಿಪಕ್ಷ ನಾಯಕನಾಗಿ ಆಯ್ಕೆಗೊಳ್ಳಲಿದ್ದಾರೆ ಎಂಬ ನಿರೀಕ್ಷೆಗಳಿದ್ದವು ಆದರೆ ಇದೀಗ ಆಗುತ್ತಿರುವ ಬೆಳವಣಿಗೆಯನ್ನು ಗಮನಿಸಿದರೆ ಅದು ಆಗುವುದಿಲ್ಲವೇನೊ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.