ಪಿ. ಚಿದಂಬರಂ ಮತ್ತು ರಾಜ್ಯದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿದ್ದು ಇಬ್ಬರು ನಾಯಕರು ತಿಹಾರ್ ಜೈಲಿನಲ್ಲಿದ್ದಾರೆ ಇದೀಗ ಸೋನಿಯಾ ಅಳಿಯನ ಸರದಿ .
ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರನ್ನು ಜೈಲಿಗೆ ಕಳುಹಿಸಲು ಇಡಿ ತಯಾರಿ ನಡೆಸಿದೆ. ರಾಬರ್ಟ್ ವಾದ್ರಾ ನಿರೀಕ್ಷಣಾ ಜಾಮೀನು ಪಡೆದು ಕೊಂಡಿದ್ದು, ಅವರ ಜಾಮೀನು ಅರ್ಜಿಗೆ ಜಾರಿ ನಿರ್ದೇಶನಾಲಯ ಆಕ್ಷೇಪ ವ್ಯಕ್ತಪಡಿಸಿದೆ.ಲಂಡನ್ ನಲ್ಲಿ 17 ಕೋಟಿ ರೂ. ಮೌಲ್ಯದ ಮನೆ ಖರೀದಿಗೆ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ರಾಬರ್ಟ್ ವಾದ್ರಾ ಮೇಲಿದೆ. ಅವರು ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ .