ರಾಷ್ಟ್ರಪಿತ ಮಹಾತ್ಮಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಅಂಗವಾಗಿ ಕೆಪಿಸಿಸಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸದ್ಭಾವನಾ ಯಾತ್ರೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ನಾಯಕರು, ಪ್ರತಾಪ್‍ಸಿಂಹ ಹೇಳಿಕೆಯನ್ನು ಖಂಡಿಸಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, ಬಿಜೆಪಿಯವರಿಗೆ ಮೋದಿ ದೇವರಾಗಿಯೇ ಇರಲಿ ಎಂದರು ಹಾಗು ಮಾಜಿ ಸಚಿವ ಎಚ್.ಕೆ.ಪಾಟೀಲ್ ಕುಡಾ ಪ್ರತಾಪ್‍ಸಿಂಹ ಅವರ ಹೇಳಿಕೆ ಬೇಜವಾಬ್ದಾರಿಯುತವಾದದ್ದು, ಉತ್ತರ ಕರ್ನಾಟಕದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಜಾನುವಾರುಗಳೂ ಬಲಿಯಾಗಿವೆ. ಬೆಳೆ ನಾಶವಾಗಿದೆ. ಜನ ನೆಲೆ ಕಳೆದುಕೊಂಡಿದ್ದಾರೆ. ದೇವರೆಂದು ಬಿಜೆಪಿಯವರು ಹೇಳುವ ಪ್ರಧಾನಿಯವರು ಮೊದಲು ಕಷ್ಟದಲ್ಲಿರುವವರ ನೆರವಿಗೆ ಧಾವಿಸಲಿ ಎಂದಿದ್ದಾರೆ.