ಪ್ರವಾಹ ಪರಿಹಾರ ಕುರಿತು ರಾಜ್ಯದ ಬಳಿ ಕೆಲ ಸ್ಪಷ್ಟನೆ ಕೇಳಿರುವ ಕೇಂದ್ರ ಸರ್ಕಾರ, ನಷ್ಟದ ಪ್ರಮಾಣವನ್ನು ಅಧಿಕೃತವಾಗಿ ಪ್ರಮಾಣೀಕರಿಸುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ರಾಜ್ಯ ಸರ್ಕಾರ, ಪ್ರವಾಹದಿಂದ ಅಂದಾಜು 38,000 ಕೋಟಿಗೂ ಅಧಿಕ ಪ್ರಮಾಣದ ನಷ್ಟ ಉಂಟಾಗಿದೆ. ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಯಮಾವಳಿ ಪ್ರಕಾರ 3,500 ಕೋಟಿ ರೂ. ಪರಿಹಾರದ ನೆರವು ನೀಡಬೇಕೆಂದು ಪ್ರಸ್ತಾವನೆಯಲ್ಲಿ ತಿಳಿಸಿತ್ತು. ಕೇಂದ್ರದ ತಂಡ ರಾಜ್ಯಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿ, ಕೇಂದ್ರಕ್ಕೆ ವರದಿ ಸಲ್ಲಿಸಿದೆ.