ದಾವಣಗೆರೆಯಲ್ಲಿ ಮಾತನಾಡಿದ ಈಶ್ವರಪ್ಪ ಅವರು, ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಗೆ ಅಧಿಕಾರ ಹೋದ ಮೇಲೆ ಇಬ್ಬರ ಹೊಟ್ಟೆಯಲ್ಲಿ ಉರಿ ಬಿದ್ದಿದೆ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಗೆ ಮಾಡಲು ಕೆಲಸವಿಲ್ಲ. ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಸಿದ್ದರಾಮಯ್ಯ ಪರದಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಏನಾದರೂ ಹೇಳಬೇಕೆಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ ಅಷ್ಟೇ. ಜನರ ಬಯಕೆಯಂತೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.