ಕಾಂಗ್ರೆಸ್ ವಲಯದಲ್ಲಿ ನಾಯಕ ಸ್ಥಾನದ ಆಕಾಂಕ್ಷಿಗಳಿಗೆ ದೆಹಲಿಗೆ ಬರುವಂತೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಅವರಿಂದ ಸೂಚನೆ ಬರುವ ಸಾಧ್ಯತೆ ಇದೆ. ಹಾಲಿ ಶಾಸಕಾಂಗ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಪ್ರತಿಪಕ್ಷದ ನಾಯಕರನ್ನಾಗಿ ನೇಮಕ ಮಾಡಬೇಕೇ..? ಅಥವಾ ಬೇರೆಯವರನ್ನು ಆ ಸ್ಥಾನಕ್ಕೆ ಕೂರಿಸಬೇಕೆ ಎಂಬ ಬಗ್ಗೆ ಖುದ್ಧು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರೆ ನಿರ್ಧರಿಸಲಿದ್ದಾರೆ.
ಪ್ರಸ್ತುತ ದೇಶದಲ್ಲಿ ಕಾಂಗ್ರೆಸ್ ಸಂಕಷ್ಟದಲ್ಲಿದೆ. ಹಾಗಾಗಿ ಪಕ್ಷವನ್ನು ಸದೃಢಗೊಳಿಸಬೇಕಾಗಿದೆ. ಇದಕ್ಕಾಗಿ ಸಮರ್ಥ ನಾಯಕರ ಅಗತ್ಯವಿದೆ. ಆಂತರಿಕ ಬೇಗುದಿ, ಭಿನ್ನಾಭಿಪ್ರಾಯಗಳನ್ನ ವರಿಷ್ಠರು ಬಗೆಹರಿಸಿ ಪಕ್ಷವನ್ನು ಮುನ್ನಡೆಸಬೇಕಾಗಿದೆ. ಅದಕ್ಕಾಗಿ ಎಚ್ಚರಿಕೆ ಹೆಜ್ಜೆ ಇಡಲು ತೀರ್ಮಾನಿಸಿದ್ದಾರೆ.