ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಗದ ಕಾರಣ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಅವರ ಪರವಾಗಿ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಕೆಲಸ ಮಾಡಿದ್ದಾರೆ. ಬಿಜೆಪಿ ಬಹಿರಂಗ ಬೆಂಬಲ ನೀಡಿತ್ತು.
ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಒಬ್ಬರು ಶಾಸಕರು ಇಲ್ಲದಿದ್ದರೂ ತಮ್ಮ ಬೆಂಬಲದಿಂದ ಜಯಗಳಿಸಿದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಸಂಸದರಾಗಿರುವುದರಿಂದ ಕಾಂಗ್ರೆಸ್ ಸಂಸದರು ಎನ್ನುವಂತೆಯೇ ಪಕ್ಷದ ಮುಖಂಡರು ಕಾರ್ಯಕರ್ತರು ಭಾವಿಸಿದ್ದಾರೆ ಹೀಗಿರುವಾಗಲೇ ಕಾಂಗ್ರೆಸ್ ಕಾರ್ಯಕರ್ತರಿಗೆ ಶಾಕ್ ನೀಡುವಂತಹ ನಿರ್ಧಾರವನ್ನು ಸುಮಲತಾ ಅಂಬರೀಶ್ ಕೈಗೊಂಡಿದ್ದಾರೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ. ಈ ಮೂಲಕ ಅವರು ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗಿದೆ.