ಡಾ. ಜಿ. ಪರಮೇಶ್ವರ್ ಅವರ ಒಡೆತನದ ಶಿಕ್ಷಣ ಸಂಸ್ಥೆಗಳು ಹಾಗೂ ನಿವಾಸದ ಮೇಲೆ ಐಟಿ ದಾಳಿ ನಡೆದಿರುವುದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ದೇವೇಗೌಡ ಅವರು ಇದೆಲ್ಲ ರಾಜಕೀಯ ಪ್ರೇರಿತವಾಗಿದ್ದು, ವಿರೋಧಿಗಳನ್ನು ಮಣಿಸಲು ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಪರಮೇಶ್ವರ್ ರಾತ್ರಿ ಬೆಳಗಾಗುವುದರೊಳಗಾಗಿ ಶ್ರೀಮಂತರಾದವರಲ್ಲ. ಅವರ ತಂದೆ ಈ ಶಿಕ್ಷಣ ಸಂಸ್ಥೆಗಳನ್ನು ಬಹು ಹಿಂದೆಯೇ ಸ್ಥಾಪಿಸಿದ್ದರು ಎಂದು ದೇವೇಗೌಡರು ಹೇಳಿದ್ದಾರೆ ಹಾಗು ಬಿಜೆಪಿಯವರೇನು ಸತ್ಯ ಹರಿಶ್ಚಂದ್ರರಾ ಎಂದು ವ್ಯಂಗ್ಯವಾಡಿದ್ದಾರೆ. ಆದ್ರೆ ದೇವೇಗೌಡ ಅವರು ಈ ರೀತಿ ಹೇಳಿದ್ದೇಕೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಹರಿದಾಡ್ತಿದೆ.