ಪ್ರಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಕದ್ರಿ ಗೋಪಾಲ್ ನಾಥ್ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಅವರು ಕೊನೆಯುಸಿರೆಳೆದರು.
ಸ್ಯಾಕ್ಸೋಫೋನ್ ವಾದಕರಾಗಿದ್ದ ಕದ್ರಿ ಅವರು ಕರ್ನಾಟಕ ಸಂಗೀತದಲ್ಲಿ ಅಚ್ಚಳಿಯದ ಹೆಜ್ಜೆಗುರುತು ನಿರ್ಮಿಸಿದವರು. ಸ್ಯಾಕ್ಸೋಫೋನ್ ಮೂಲಕ ವಿಶ್ವದೆಲ್ಲೆಡೆ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಮನೆಮಾತಾಗಿಸಿದ ಕೀರ್ತಿ ಕದ್ರಿ ಅವರಿಗೆ ಸಲ್ಲುತ್ತದೆ..ಗೋಪಾಲನಾಥ್ ಅವರು 1950ರ ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಿಸಿದರು. ತಂದೆ ತನಿಯಪ್ಪನವರು ನಾಗಸ್ವರ ವಿದ್ವಾಂಸರಾಗಿದ್ದರಿಂದ ಸಂಗೀತವೆಂಬುದು ಗೋಪಾಲನಾಥರ ದಿನಚರಿಯಾಗಿತ್ತು.ತಾಯಿಗಂಗಮ್ಮನವರು.
ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರು ಸ್ವರ ಮಾಧುರ್ಯಕ್ಕೆ ವಿರಾಮದ ಚುಕ್ಕಿ ನೀಡಿದ್ದಾರೆ. ಅವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.