ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತಿದ್ದ ಒಂಬತ್ತು ಮಂದಿಯನ್ನು ಹೊರ ಹಾಕಲಾಗಿದ್ದು, ಇವರುಗಳು ಯಡಿಯೂರಪ್ಪನವರ ಬೆಂಬಲಿಗರು ಎಂಬುದು ಗಮನಾರ್ಹ. ಯಡಿಯೂರಪ್ಪ ಬಿಜೆಪಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನೇಮಕಗೊಂಡಿದ್ದ ಕಚೇರಿ ಕಾರ್ಯದರ್ಶಿ, ಕಂಪ್ಯೂಟರ್ ಆಪರೇಟರ್, ಫೋಟೋಗ್ರಾಫರ್, ವಿಡಿಯೋಗ್ರಾಫರ್, ಸೂಪರ್ ವೈಸರ್, ಸ್ವಾಗತಕಾರರು, ಅಡಿಗೆಯವರು ಸೇರಿದಂತೆ ಒಟ್ಟು ಒಂಬತ್ತು ಮಂದಿಯನ್ನು ಕೆಲಸದಿಂದ ಈಗ ತೆಗೆಯಲಾಗಿದೆ.
ದಿಢೀರ್ ಕೈಗೊಂಡ ಈ ನಿರ್ಣಯವನ್ನು ಕೆಲವರು ಪ್ರಶ್ನಿಸಿದ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ವಜಾಗೊಂಡಿರುವ ಸಿಬ್ಬಂದಿಗಳು ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಬಳಿ ತಮ್ಮ ಅಹವಾಲು ಹೇಳಿಕೊಂಡಿದ್ದಾರೆನ್ನಲಾಗಿದೆ.