ಚಾಮುಂಡೇಶ್ವರಿ ಸನ್ನಿಧಿಗೆ ಬಂದಿಲ್ಲ ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ್ ಯು ಟರ್ನ್ ತೆಗೆದುಕೊಂಡಿದ್ದಾರೆ.ನಾನು ಯಾವುದೇ ಆಣೆ ಪ್ರಮಾಣ ಮಾಡಲು ಇಲ್ಲಿಗೆ ಬಂದಿಲ್ಲ. ನನ್ನನ್ನು ಖರೀದಿಸಿದ ಅವನನ್ನು ಸ್ವಾಗತಿಸಲು ಬಂದಿದ್ದೇನೆ ಎಂದು ಚಾಮುಂಡಿ ಬೆಟ್ಟದಲ್ಲಿ ಅವರು ಹೇಳಿದ್ದಾರೆ.
ಮಾಜಿ ಸಚಿವ ಸಾರಾ ಮಹೇಶ್ 25 ಕೋಟಿ ರೂಪಾಯಿಗೆ ಹೆಚ್. ವಿಶ್ವನಾಥ್ ಸೇಲ್ ಆಗಿದ್ದಾರೆ ಎಂದು ಆರೋಪ ಮಾಡಿದ್ದಕ್ಕೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣಕ್ಕೆ ಸ್ಥಳ ನಿಗದಿಯಾಗಿತ್ತು. ಹೆಚ್. ವಿಶ್ವನಾಥ್ ಮತ್ತು ಸಾರಾ ಮಹೇಶ್ ತಾವು ಮಾಡಿರುವ ಆರೋಪ ಪ್ರತ್ಯಾರೋಪಗಳ ಕುರಿತು ಇಂದು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡುವುದಾಗಿ ಹೇಳಲಾಗಿತ್ತು. ಈ ವಿಚಾರ ಭಾರೀ ಗಮನ ಸೆಳೆದಿದೆ.