ಜೀವಾವಧಿ ಶಿಕ್ಷೆ ಅನುಭವಿಸಿರುವ ಏಳು ಅಪರಾಧಿಗಳನ್ನು ಬಂಧ ಮುಕ್ತಗೊಳಿಸಲು ತಮಿಳುನಾಡು ರಾಜ್ಯಪಾಲ ಬನ್ವರೀಲಾಲ್ ಪುರೋಹಿತ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಈ ಕುರಿತು ಅವರು ತಮಿಳುನಾಡು ಮುಖ್ಯಮಂತ್ರಿ ಇ.ಪಳನೀಸ್ವಾಮಿ ಅವರಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿರುವ ನಳಿನಿ, ಶ್ರೀಹರನ್, ಸುತೇಂದ್ರರಾಜಾ, ಜಯಕುಮಾರ್, ರಾಬರ್ಟ್ ಪೈಯಾಸ್, ಪಿರಾರಿವಳನ್ ಮತ್ತು ರವಿಚಂದ್ರನ್ ಅವರನ್ನು ಬಿಡುಗಡೆಗೊಳಿಸಲು ರಾಜ್ಯಸಂಪುಟ ಸಭೆ ಕೈಗೊಂಡಿರುವ ನಿರ್ಧಾರದ ಬಗ್ಗೆ ರಾಜ್ಯಪಾಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.