ಪ್ರಬಲ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಎರಡು ದಿನದ ಹಿಂದೆ ಸೊಲ್ಪಮಟ್ಟಿನ ಆರೋಗ್ಯ ಸಮಸ್ಸೆ ಬಂದಿತ್ತು ಇದೀಗ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಚಿವರಿಗೆ ಸ್ಟಂಟ್ ಅಳವಡಿಸಲಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎನ್ನಲಾಗಿದೆ. ನಿನ್ನೆ ಬೆಳಗ್ಗೆ ಜಮೀರ್ ಅಹಮ್ಮದ್ ಖಾನ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.