ಡಿಕೆಶಿ ಬಂಧನ ವಿಚಾರ ಮತ್ತು ಜಾರಿ ನಿರ್ದೇಶನಾಲಯ ತನಿಖೆ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡಿದ್ದ ಸೋನಿಯಾ ಗಾಂಧಿ, ಡಿ.ಕೆ. ಶಿವಕುಮಾರ್ ಬೆಂಬಲಕ್ಕೆ ಪಕ್ಷ ಇದೆ ಎಂದು ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಬಂಧನ ವಿಚಾರ ರಾಜಕೀಯ ದ್ವೇಷದಿಂದ ಎಂದು ಕಾಂಗ್ರೆಸ್ ನಾಯಕರು ಮಾತನಾಡಿಕೊಳ್ಳುತ್ತಿದ್ದಾರೆ ಡಿ.ಕೆ. ಶಿವಕುಮಾರ್ ಅವರನ್ನು ಹಿರಿಯ ಕಾಂಗ್ರೆಸ್ ನಾಯಕರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ತಿಹಾರ್ ಜೈಲಿನಲ್ಲಿ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಹಿಂದೆಯೇ ಭೇಟಿ ಮಾಡಿದ್ದ ಸೋನಿಯಾಗಾಂಧಿ, ನಾಳೆ ತಿಹಾರ್ ಜೈಲಿಗೆ ಭೇಟಿ ನೀಡಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲಿದ್ದಾರೆ.