ಸ್ಪೀಕರ್ ಆದೇಶ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ 17 ಮಂದಿ ಅನರ್ಹ ಶಾಸಕರ ಮುಂದೂಡಿದ್ದ ವಿಚಾರಣೆ ನ್ಯಾಯಮೂರ್ತಿ ಎನ್.ವಿ.ರಮಣ ಅವರ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ನಾಳೆಯಿಂದ ಆರಂಭವಾಗಬೇಕಿತ್ತು ಆದರೆ ಕಾಂಗ್ರೆಸ್ ಪರ ವಕೀಲರಾದ ಕಪಿಲ್ ಸಿಬಾಲ್ ಅವರು ಆಕ್ಷೇಪಣೆ ಸಲ್ಲಿಸಲು ಒಂದು ವಾರ ಕಾಲಾವಕಾಶ ಬೇಕೆಂದು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಒಂದು ದಿನ ಕಾಲಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಿದ್ದಾರೆ. ಹಾಗು ಒಂದು ವಾರ ಕಾಲಾವಕಾಶ ನೀಡಲು ಆಗುವುದಿಲ್ಲ.
ಈಗಾಗಲೆ ತುಂಬ ಸಮಯವಾಗಿದೆ ಒಂದು ದಿನ ಕಾಲಾವಕಾಶ ನೀಡುತ್ತೇವೆ. ಅಷ್ಟರಲ್ಲಿ ನಿಮ್ಮ ಆಕ್ಷೇಪಣೆ ಸಲ್ಲಿಸಿ ಎಂದು ನಾಳೆಯ ವಿಚಾರಣೆಯನ್ನು ಅ.23ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ. ಎನ್ನಲಾಗುತ್ತಿದೆ.