ಯಡಿಯೂರಪ್ಪ ಅವರು ಅನರ್ಹ ಶಾಸಕರ ಕ್ಷೇತ್ರದ ಮತದಾರರ ಮನವೊಲಿಕೆಗೆ ಅಭಿವೃದ್ಧಿ ಕಾರ್ಯಗಳ ಮೊರೆ ಹೋಗಿದ್ದಾರೆ ಎನ್ನಲಾಗಿದೆ.
ಅನರ್ಹ ಶಾಸಕರ ಕ್ಷೇತ್ರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವುದರೊಂದಿಗೆ ಉಪಚುನಾವಣೆ ಪ್ರಚಾರ ಕೈಗೊಳ್ಳಲಿದ್ದಾರೆ. ಹೊಸಕೋಟೆ ಕ್ಷೇತ್ರದಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆಗೆ ಅಕ್ಟೋಬರ್ 28 ರಂದು ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ನೀರು ತುಂಬಿಸುವ ಯೋಜನೆ ನೆಡೆಯುತ್ತಿದೆ .